ನಿಮ್ಮ ಕೂದಲು ಹಲವು ಕಾರಣಗಳಿಂದ ಉದರಬಹುದು ಕೆಮಿಕಲ್ ಮಿಶ್ರಿತ ಶಂಪೂ ಸೋಪು ಅಥವಾ ದೇಹದ ಅನಾರೋಗ್ಯದಿಂದ ಕೂದಲು ಉದರಬಹುದು.  ಮನೆಯಲ್ಲೇ ನೈಸರ್ಗಿಕವಾಗಿ ಸಿಗುವಂತ ಈ ವಿಧಾನವನ್ನು ಮಾಡಿ ನೋಡಿ.

ಕೊಬ್ಬರಿ ಎಣ್ಣೆಯನ್ನು ಬಿಸಿ ಮಾಡಿಕೊಂಡು, ಇದಕ್ಕೆ ಕರಿಬೇವು ಎಲೆ ಹಾಕಿಕೊಂಡು ಬಿಸಿ ಮಾಡಿಕೊಳ್ಳಿ. ಎಣ್ಣೆ ಹದ ಬಿಸಿ ಇರುವಾಗ ತಲೆಗೆ ಹಚ್ಚಿಕೊಳ್ಳಿ. ಕೂದಲು ಉದುರುವುದು ನಿಂತು, ಸೊಂಪಾಗಿ ಬೆಳೆಯುತ್ತವೆ.

ಅಥವಾ , ಮೊಸರು ಮತ್ತು ಕರಿಬೇವು ಪೇಸ್ಟ್ ಮಾಡಿಕೊಂಡು ತಲೆಗೆ ಹಚ್ಚಿಕೊಳ್ಳಿ. ಒಂದು ಗಂಟೆ ಬಿಟ್ಟು ಶ್ಯಾಂಪೂ ಬಳಸಿ ಸ್ನಾನ ಮಾಡಿ. ನಿಯಮಿತವಾಗಿ ಹೀಗೇ ಮಾಡುತ್ತಿದ್ದರೆ, ಕೂದಲು ಉದುರುವಿಕೆ ನಿಲ್ಲುವುದು. ಮತ್ತು ದೇಹ ಕೂಲ್ ಆಗಿರುತ್ತದೆ.

ಯಾವಾಗಲೂ ನೈಸರ್ಗಿಕ ಶಾಂಪೂವನ್ನೇ ತಲೆ ತೊಳೆಯಲು ಬಳಸಿ. ಆದರೂ ಬಹಳಷ್ಟು ಶಾಂಪೂಗಳು ರಾಸಾಯನಿಕವನ್ನೇ ಹೊಂದಿರುತ್ತದೆ. ಇದು ನಿಮ್ಮ ಕೂದಲ ಮೇಲೆ ಕೆಟ್ಟ ಪರಿಣಾಮ ಬೀರಲೂ ಬಹುದು. ರಾಸಾಯನಿಕಗಳು ತಲೆಯ ಉಷ್ಣವನ್ನು ಹೆಚ್ಚಿಸುತ್ತದೆ. ಇದರ ಪರಿಣಾಮವೇ ಪಿತ್ತ. ಹಾಗಾಗಿ ಸೀಗೆಕಾಯಿ, ನೆಲ್ಲಿಕಾಯಿ ಪುಡಿಯನ್ನು ತಲೆ ತೊಳೆಯಲು ಬಳಸುವುದು ಉತ್ತಮ.

ಕಪ್ಪು ಎಳ್ಳು ಮತ್ತಿತರ ವಸ್ತುಗಳನ್ನು ಸೇರಿಸಿ ಮನೆಯಲ್ಲೇ ಎಣ್ಣೆ ಮಾಡಿ ನಿತ್ಯ ತಲೆಗೆ ಹಚ್ಚುವುದರಿಂದಲೂ ಕೂದಲು ಉದುರುವುದನ್ನು ಕಡಿಮೆ ಮಾಡಿಕೊಳ್ಳಬಹುದು.

ತಲೆಗೆ ಸ್ನಾನ ಮಾಡಿದ ಮೇಲೆ ತಲೆ ಬುಡವನ್ನು ಚೆನ್ನಾಗಿ ಮಸಾಜ್ ಮಾಡುವಂತೆ ಉಜ್ಜಿ. ಇದು ನಿಮ್ಮ ತಲೆಬುಡದಲ್ಲಿ ರಕ್ತ ಬಸಳೆ ಸೊಪ್ಪಿನ ಹಸಿಯಾದ ಜ್ಯೂಸ್ ಮಾಡಿ ಕುಡಿಯಿರಿ. ಇದು ಕೂದಲ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಕ್ಯಾರೆಟ್ ಜ್ಯೂಸ್ ಕೂಡಾ ಉತ್ತಮ.

ಕಹಿಬೇವು, ಮೆಹೆಂದಿ ಸೊಪ್ಪನ್ನು ಸಾಸಿವ ಎಣ್ಣೆಯಲ್ಲಿ ಕುದಿಸಿ ತಣಿಸಿ. ನಂತರ ಇದನ್ನು ಸೋಸಿ ಬಾಟಲಿಯಲ್ಲಿ ಹಾಕಿಡಿ. ಅದಕ್ಕೆ ಕೆಲವು ಚೂರು ಕರ್ಪೂರವನ್ನೂ ಹಾಕಿಡಿ. ಈ ಎಣ್ಣೆಯನ್ನು ಪ್ರತಿನಿತ್ಯ ತಲೆಗೆ ಬಳಸಬಹುದು. ಮಸಾಜ್‌ಗಾಗಿಯೂ ಬಳಸಬಹುದು.

LEAVE A REPLY

Please enter your comment!
Please enter your name here